ಬ್ರಿಟನ್ ಪ್ರಧಾನಿ ಹುದ್ದೆ ರೇಸ್‌: ಮುನ್ನಡೆ ಕಾಯ್ದುಕೊಂಡ ರಿಷಿ ಸುನಕ್

ಲಂಡನ್: ಬ್ರಿಟನ್ ಪ್ರಧಾನಿ ಸ್ಪರ್ಧೆಯಲ್ಲಿ ಭಾನುವಾರ ಒಂಬತ್ತು ಅಭ್ಯರ್ಥಿಗಳ ಹೆಸರು ಕೇಳಿಬಂದಿದ್ದು, ಮಾಜಿ ಸಚಿವ ರಿಷಿ ಸುನಕ್ ಅವರು ಕನ್ಸರ್ವೇಟಿವ್ ಪಕ್ಷದ ನಾಯಕ ಸ್ಥಾನ ಹಾಗೂ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ಪಟ್ಟಿಯಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪ್ರಮುಖ ಅಭ್ಯರ್ಥಿಗಳ ಪಟ್ಟಿಗೆ ಭಾನುವಾರ ವಾಣಿಜ್ಯ ಸಚಿವ ಪೆನ್ನಿ ಮೊರ್ಡಾಂಟ್ ಅವರ ಹೆಸರು ಸೇರ್ಪಡೆಗೊಂಡಿದೆ. ರಿಷಿ ಅವರ ಬಳಿಕ ಪ್ರಧಾನಿ ಸ್ಥಾನಕ್ಕೆ ಪೆನ್ನಿ ಅವರು ಎರಡನೇ ಸಂಭಾವ್ಯ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಬ್ರಿಟನ್‌ನ ಸಾರಿಗೆ ಕಾರ್ಯದರ್ಶಿ ಗ್ರಾಂಟ್ ಶಾಪ್ಸ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಜೆರೆಮಿ ಹಂಟ್ ಮತ್ತು ಪಾಕಿಸ್ತಾನಿ ಮೂಲದ ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರ ಉಮೇದುವಾರಿಕೆಯ ಬಳಿಕ ಪೆನ್ನಿ ಅವರು ಈಗ ‘ಪಿಎಂ4ಪಿಎಂ’ ಎನ್ನುವ ಹ್ಯಾಷ್‌ಟ್ಯಾಗ್‌ವುಳ್ಳ ವಿಡಿಯೊ ಹಂಚಿಕೊಂಡು ತಮ್ಮ ಉಮೇದುವಾರಿಕೆ ಘೋಷಿಸಿದ್ದಾರೆ.
ಪ್ರಧಾನಿ ಸ್ಥಾನದ ಇತರ ಆಕಾಂಕ್ಷಿಗಳಲ್ಲಿ ಗೋವಾ ಮೂಲದ ಅಟಾರ್ನಿ ಜನರಲ್ ಸುಯೆಲ್ಲಾ ಬ್ರೆವರ್‌ಮನ್, ಇರಾಕ್‌ ಮೂಲದ ನಾಧಿಮ್ ಜಹಾವಿ, ನೈಜೀರಿಯಾ ಮೂಲದ ಕೆಮಿ ಬೆಡಾನೋಚ್ ಮತ್ತು ಟಾಮ್ ತುಗೆಂಧತ್ ಸೇರಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಶೀಘ್ರದಲ್ಲೇ ತನ್ನ ಉಮೇದುವಾರಿಕೆಯನ್ನು ಘೋಷಿಸುವ ನಿರೀಕ್ಷೆಯಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಅಬ್ಬಬ್ಬಾ...ಅದೆಷ್ಟು ಉದ್ದನೆಯ ಕೂದಲು ; ಇದು ಗಿನ್ನೆಸ್ ದಾಖಲೆಗೆ ಸೇರ್ಪಡೆ : ಇವರ ಕೂದಲು ವಿಶ್ವದ ಅತಿ ಎತ್ತರದ ಮನುಷ್ಯನಿಗಿಂತಲೂ ಉದ್ದ | ವೀಕ್ಷಿಸಿ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement