ಕಾರವಾರ: ಕಾರವಾರ-ಬೆಳಗಾವಿ ರಾಜ್ಯ ಹೆದ್ದಾರಿಯ ಅಣಶಿ ಘಟ್ಟದಲ್ಲಿ ಎರಡು ಕಡೆಗಳಲ್ಲಿ ಇಂದು, ಸೋಮವಾರ ಬೆಳಗ್ಗೆ ಗುಡ್ಡ ಕುಸಿದಿದ್ದು ವಾಹನ ಸಂಚಾರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತವಾಗಿದೆ. ಇದು ಕಾರವಾರದಿಂದ ಜೊಯಿಡಾ ಮೂಲಕ ದಾಂಡೇಲಿ, ಬೆಳಗಾವಿ, ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ. ಒಂದು ವಾರದ ಹಿಂದೆಯೂ ಇಲ್ಲಿ ದೊಡ್ಡ ಗಾತ್ರದ ಕಲ್ಲುಗಳು ರಸ್ತೆ ಮೇಲೆ ಬಿದ್ದಿತ್ತು. ಸಾರ್ವಜನಿಕರುತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.
ಕಾರವಾರಕ್ಕೆ ಹೋಗುವ ವಾಹನಗಳಿಗೆ ಅಥವಾ ಕಾರವಾರದಿಂದ ಬೆಳಗಾವಿ, ಧಾರವಾಡಕ್ಕೆ ಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗದ ಮೂಲಕ ಸಂಚರಿಸಲು ಸೂಚಿಸಲಾಗುತ್ತಿದೆ.
ರಸ್ತೆಯನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಕಳೆದ ವರ್ಷ ಗುಡ್ಡ ಕುಸಿದು ಒಂದು ತಿಂಗಳಿಗಿಂತ ಹೆಚ್ಚು ಸಮಯದ ವರೆಗೆ ಸಂಚಾರ ಸ್ಥಗಿತಗೊಂಡಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ