ನಾಳೆಯಿಂದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ಪ್ರವಾಸ

ಬೆಂಗಳೂರು: ಸತತ ಮಳೆಯಿಂದ ತತ್ತರಿಸಿರುವ ಕೊಡುಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸಲಹೆ ಸೂಚನೆ ನೀಡಲಾಗಿದೆ. ನಾಳೆಯಿಂದ ಅತಿ ಮಳೆಯಿಂದ ತತ್ತರಿಸಿರುವ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಳದಲ್ಲಿಯೇ ಸಭೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ನಿರ್ದೇಶನ ನೀಡುವುದಾಗಿ ಹೇಳಿದರು.

ನಾಳೆ, ಜುಲೈ 12ರಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ.
ಬುಧವಾರ, ಜುಲೈ 13ರಂದು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅವರು ತಿಳಿಸಿದರು. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕೊಡಗು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳು ತತ್ತರಿಸಿಹೋಗಿದೆ, ಹಲವೆಡೆ ಸಂಪರ್ಕ ಕಡಿತವಾಗಿದೆ. ಹಲವು ಕಡೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ| ಕಬ್ಬು ದರ ನಿಗದಿ ; ಸಿಎಂ ಸಭೆಗೂ ಮುನ್ನ ಕೈಕೈ ಮಿಲಾಯಿಸಿದ ಇಬ್ಬರು ರೈತ ನಾಯಕರ ಬೆಂಬಲಿಗರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement