ಬೆಂಗಳೂರು: ನಟ ಸುದೀಪ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾದ ಮಾತುಗಳನ್ನಾಡುತ್ತಿರುವ ಚರಣ್ ಹಾಗೂ ಅಹೋರಾತ್ರ ಎಂಬುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಆನ್‌ಲೈನ್ ಗೇಮ್‌ಗಳ ವಿಚಾರದಲ್ಲಿ ಸುದೀಪ್ ಅವರ ವಿರುದ್ಧ ಚರಣ್ ಹಾಗೂ ಅಹೋರಾತ್ರ ಎಂಬವರು ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಹಲವು ಪೋಸ್ಟ್ ಹಾಕಿದ್ದರು. ಇವು ಸುದೀಪ್ ಅಭಿಮಾನಗಳ ಆಕ್ರೋಶಕ್ಕೂ ಕಾರಣವಾಗಿದೆ.
ಭಾರತೀಯ ಚಲನಚಿತ್ರರಂಗದ ಹೆಸರಾಂತ ಕಲಾವಿದ ಕಿಚ್ಚ ಸುದೀಪ್ ಅವರ ವಿರುದ್ಧ ಅಹೋರಾತ್ರ ಮತ್ತು ಚರಣ್ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ, ಅವಹೇಳನಕಾರಿಯಾಗಿ ಪದಬಳಕೆ ಮಾಡಿ ಕನ್ನಡ ಚಿತ್ರರಂಗ ಹಾಗೂ ನಟ ಸುದೀಪ ಅವರ ಗೌರವ ಹಾಗೂ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳು ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಸಾರ್ವಜನಿಕರಲ್ಲಿ ಇಲ್ಲಸಲ್ಲದ ಗೊಂದಲಗಳನ್ನು ಮೂಡಿಸಬಹುದು. ಹೀಗಾಗಿ ಚರಣ್ ಮತ್ತು ಅಹೋರಾತ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ