ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸೋಮವಾರ ತಮಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ವಿಷಯವನ್ನು ಅವರೇ ಟ್ವೀಟ್‌ನಲ್ಲಿ ಸ್ವತಃ ಖಚಿತಪಡಿಸಿದ್ದಾರೆ. ವೈದ್ಯರ ಸಲಹೆಯಂತೆ ಮುಂದಿನ 10 ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ.

ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನುಸೋಮವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ. ನನಗೆ ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಅದರಂತೆಯೇ ನಾನು ಹೋಮ್‌ ಐಸೋಲೇಶನ್‌ನಲ್ಲಿ ಇದ್ದೇನೆ ಎಂದು ಅವರು ತಿಳಿಸಿದ್ದಾರೆ.

ಹೀಗಾಗಿ ನನ್ನನ್ನು ಯಾರೂ ಭೇಟಿ ಮಾಡಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದ್ದಾರೆ. ಮೂರು-ನಾಲ್ಕು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ -19 ಪರೀಕ್ಷೆಯನ್ನು ತಪ್ಪದೇ ಮಾಡುವಂತೆ ಕುಮಾರಸ್ವಾಮಿ ವಿನಂತಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement