ಹಳಿಯಾಳ: ಮನೆ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು

ಕಾರವಾರ: ನಿರಂತರ ಮಳೆಯ ಪರಿಣಾಮ ಮನೆಯ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಎಂದು ಗುರುತಿಸಲಾಗಿದೆ. ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆಗೆ ಮನೆಯ ಮಣ್ಣಿನ ಗೋಡೆ ನೆನೆದು ಕುಸಿತವಾಗಿದೆ. ಘಟನಾ ಸ್ಥಳಕ್ಕೆ ಹಳಿಯಾಳ ತಹಶೀಲ್ದಾರ ಪ್ರಕಾಶ ಗಾಯಕವಾಡ ಹಾಗೂ ತಾ.ಪಂ ಇಓ ಪರಶುರಾಮ್ ಗಸ್ತಿ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ನಿಮ್ಮ ಕಾಮೆಂಟ್ ಬರೆಯಿರಿ

advertisement