ಕೇರಳದ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಕಣ್ಣೂರು (ಕೇರಳ): ಮಂಗಳವಾರ ಬೆಳಗ್ಗೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದ್ದು, ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.
ಬಿಜೆಪಿ ನಾಯಕ ಟಾಮ್ ವಡಕ್ಕನ್ ಅವರು, ಇಂತಹ ದಾಳಿಗಳನ್ನು ತಡೆಯುವಲ್ಲಿ ವಿಫಲವಾದ ರಾಜ್ಯದ ಸರ್ಕಾರವೇ ಇಂತಹ ಘಟನೆಗಳಿಗೆ ಹೊಣೆ ಎಂದು ಹೇಳಿದ್ದಾರೆ.

“ಸಾಮಾಜಿಕ ಸಂಘಟನೆಗಳ ಮೇಲೆ ಬಾಂಬ್ ಎಸೆಯುವ ಮಟ್ಟಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಆಘಾತಕಾರಿ ಮತ್ತು ದುರದೃಷ್ಟಕರ. ಮತ್ತು ನಾಗರಿಕ ಸಮಾಜದಲ್ಲಿ ಅದು ಸ್ವೀಕಾರಾರ್ಹವಲ್ಲ. ಈ ಹಿಂದೆಯೂ ಸಹ ಆರ್‌ಎಸ್ಎಸ್ ಕಾರ್ಯಕರ್ತರ ಮೇಲೆ ದಾಳಿಗಳು ನಡೆದಿವೆ. ಈ ರೀತಿಯ ಕಾನೂನು ಸುವ್ಯವಸ್ಥೆಯನ್ನು ತ್ವರಿತವಾಗಿ ನಿಭಾಯಿಸಬೇಕು. ಇದಕ್ಕೆ ಪೊಲೀಸರು ಮತ್ತು ರಾಜ್ಯ ಆಡಳಿತವು ಜವಾಬ್ದಾರರಾಗಿರುತ್ತಾರೆ ಎಂದು ಹೇಳಿದ್ದಾರೆ.
ಪೊಲೀಸರ ಕುಮ್ಮಕ್ಕು ತುಂಬಾ ಅಪಾಯಕಾರಿ. ಪೊಲೀಸ್ ಠಾಣೆ 100 ಮೀಟರ್ ದೂರದಲ್ಲಿದ್ದರೂ ಏನೂ ಆಗದ ನಿದರ್ಶನಗಳಿವೆ. ಕಣ್ಣೂರಿನಂತಹ ಸೂಕ್ಷ್ಮ ಜಿಲ್ಲೆಯಲ್ಲಿ ಕಚೇರಿಗಳಿಗೆ ವಿಶೇಷವಾಗಿ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

5 / 5. 2

ಶೇರ್ ಮಾಡಿ :

  1. Ravishankar Sharma K V

    Very unfortunate that the Government is allowing these groups who are bombing social organizations. Kerala Government must be annulled and be dissolved because they are incapable of controlling such heinous activities

ನಿಮ್ಮ ಕಾಮೆಂಟ್ ಬರೆಯಿರಿ

advertisement