52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ ರದ್ದು ಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:  ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ನೇಮಕ ಮಾಡಲಾಗಿದ್ದ ರಾಜ್ಯಮಟ್ಟದ ನಿಗಮ- ಮಂಡಳಿ- ಪ್ರಾಧಿಕಾರಗಳಳ ಅಧ್ಯಕ್ಷರ-ಉಪಾಧ್ಯಕ್ಷರ ನಾಮನಿರ್ದೇಶನವನ್ನ ರದ್ದು ಮಾಡಿ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯಡಿಯೂರಪ್ಪ ಅವರ ಬೆಂಬಲಿಗರಲ್ಲಿ ಮೂವರನ್ನು ಮುಂದುವರಿಸಲಾಗಿದೆ.
ನಿಗಮ-ಮಂಡಳಿ-ಪ್ರಾಧಿಕಾರಕ್ಕೆ ನಡೆದಿದ್ದ ನಾಮನಿರ್ದೇಶನ ರದ್ದತಿಯನ್ನು ಹಠಾತ್‌ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಆಪ್ತ ಕಾರ್ಯದರ್ಶಿ ಟಿಪ್ಪಣಿಯಲ್ಲಿ ಮಾಹಿತಿ ನೀಡಿದ್ದಾರೆ.ಜುಲೈ 14ರಂದು ಹೊಸ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಪಟ್ಟಿ ಪ್ರಕಟವಾಗಲಿದೆ. ಈಗ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮಣೆ ಹಾಕುವ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ತಾರಾ, ಕ್ರೆಡಲ್‌ ಅಧ್ಯಕ್ಷ ರುದ್ರೇಶ ಹಾಗೂ ಕೆಎಸ್​ಟಿಡಿಎಸ್​ ಅಧ್ಯಕ್ಷ ಸಿದ್ದಲಿಂಗಸ್ವಾಮಿ ಅವರನ್ನ ಉಳಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈ
ಆಡಳಿತಾರೂಢ ಪಕ್ಷ ಬಿಜೆಪಿಯು ಬಿಜೆಪಿ ನಿಗಮ ಮಂಡಳಿಯಲ್ಲಿ ಅಧ್ಯಕ್ಷರು ಹಾಗೂ ಬಿಜೆಪಿ ಉಪಾಧ್ಯಕ್ಷರನ್ನು ಬದಲಾವಣೆ ಮಾಡಿ, ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕೊಟ್ಟು ಸಮಾಧಾನ‌ ಪಡಿಸಿ ಮುಂದಿನ ಚುನಾವಣೆ ಎದುರಿಸುವ ಲೆಕ್ಕಾಚಾರದಲ್ಲಿದೆ.

 

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement