ಬ್ರಹ್ಮಶ್ರೀ ನಾರಾಯಣಗುರು ಪಾಠ ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಕೆ : ಶಿಕ್ಷಣ ಇಲಾಖೆ

ಬೆಂಗಳೂರು : ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬ್ರಹ್ಮರ್ಷಿ ನಾರಾಯಣ ಗುರುಗಳ ಪಠ್ಯವನ್ನು ಪ್ರಸ್ತುತ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಅಳವಡಿಸಿರುವುದನ್ನು ತೆಗೆದು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಯಥಾವತ್ತಾಗಿ ಅಳವಡಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

2023-24ನೇ ಸಾಲಿಗೆ ಪ್ರಸ್ತುತ 10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪುಸ್ತಕದಲ್ಲಿ ಇರುವ ಶ್ರೀನಾರಾಯಣಗುರು ಅವರ ವಿಷಯಾಂಶಗಳನ್ನು ಕೈಬಿಟ್ಟು, 2023-24ನೇ ಸಾಲಿಗೆ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement