ಉಡುಪಿ: ಹಿಂದುಳಿದ ವರ್ಗಗಳು ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾದ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.
ಘಟನೆಯಲ್ಲಿ ಎಸ್ಕಾರ್ಟ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ಪಥ ಬದಲಿಸಿದ ಕಾರಣ, ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.
ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಸಿಬ್ಬಂದಿ ಗಣೇಶ ಆಳ್ವ ಹಾಗೂ ಚಾಲಕ ಚರಣ್ ಅವರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ