ಬೆಂಗಳೂರು : ಖಾಸಗಿ ಶಾಲಾ ಮಕ್ಕಳಂತೆಯೇ ಸರ್ಕಾರಿ ಶಾಲಾ ಮಕ್ಕಳು ಕೂಡ ಗುಣಮಟ್ಟದ ಕಲಿಕೆಯತ್ತ ಸಾಗಲಿ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ಮುಂದಾಗಿದ್ದು, ಇದಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಪ್ರಸಕ್ತ ಸಾಲಿನಿಂದಲೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭ ಮಾಡಲು ಮುಂದಾಗಿದ್ದು, ಇದಕ್ಕಾಗಿ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಮೈಸೂರಿನ ಇರೋ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಸಂಸ್ಥೆಯಲ್ಲಿ ವಿಶೇಷ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದ ಶಿಕ್ಷಕರು ಮಕ್ಕಳಿಗೆ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ ಕೊಡುತ್ತಾದೆ ಎಂದು ಹೇಳಲಾಗಿದ್ದು, ಒಂದು ವೇಳೆ ಶಿಕ್ಷಕರ ಕೊರತೆ ಕಂಡುಬಂದರೆ ಔಟ್ ಸೋರ್ಸ್ ಅಥವಾ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಂಡು ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ಮುಂದಾಗಿದೆ. 1 ರಿಂದ 6 ಅಥವಾ 1-8 ನೇ ತರಗತಿ ವರೆಗೆ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡಲು ಶಿಕ್ಷಣ ಇಲಾಖೆ ಯೋಜಿಸಿದೆ. ವಾರದಲ್ಲಿ ಒಂದು ದಿನ ಅಥವಾ ವಾರದಲ್ಲಿ ಎರಡು ದಿನ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ವೇಳಾಪಟ್ಟಿ ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ತಾತ್ವಿಕ ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಮುಖ್ಯಮಂತ್ರಿಯ ಜೊತೆ ಸಭೆ ನಂತರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.


ನಿಮ್ಮ ಕಾಮೆಂಟ್ ಬರೆಯಿರಿ