ರಾಜ್ಯದಲ್ಲಿ ಬುಧವಾರ 1,231 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಬುಧವಾರ 1,231 ಮಂದಿಗೆ ಕೊರೊನಾ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿಯೇ 1,124 ಪ್ರಕರಣ ವರದಿಯಾಗಿದೆ. ಇದೇವೇಳೆ 1,047 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಶೂನ್ಯ ಮರಣ ಪ್ರಮಾಣ ದಾಖಲಾಗಿದೆ.
ರಾಜ್ಯದ ಈಗ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ತಲುಪಿದೆ. ರಾಜ್ಯದ ಪಾಸಿಟಿವಿಟಿ ದರ ಶೇ.4.78 ಕ್ಕೆ ತಲುಪಿದೆ.
ಒಟ್ಟು ಇಲ್ಲಿವರೆಗೂ 39,35,088 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಒಟ್ಟು 40,083 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 25,743 ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಬೆಂಗಳೂರಿನ ಬಳಿಕ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಶೂನ್ಯ ಮರಣ ಪ್ರಮಾಣ ದಾಖಲಾಗಿದೆ. ಬೆಂಗಳೂರಿನ ಬಳಿಕ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 2,78,780 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 25,743 ಸ್ಯಾಂಪಲ್‌ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 01, ಬಳ್ಳಾರಿ 05, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 1,124, ಬೀದರ್ 04, ಚಿತ್ರದುರ್ಗ 04, ದಕ್ಷಿಣ ಕನ್ನಡ 09, ಧಾರವಾಡ 19, ಹಾಸನ 01, ಕೋಲಾರ 11, ಮಂಡ್ಯ 04, ಮೈಸೂರು 13, ರಾಮನಗರ 05, ಶಿವಮೊಗ್ಗ 03, ತುಮಕೂರು 07, ಉಡುಪಿ 07 ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement