ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗು ಸಾವು

ಉಡುಪಿ: ಆಟವಾಡುತ್ತಿದ್ದ ಐದು ವರ್ಷದ ಮಗುವೊಂದು ನೀರಿನ‌ ಹೊಂಡಕ್ಕೆ ಬಿದ್ದುಮೃತಪಟ್ಟ‌ ದುರ್ಘಟನೆ ಜಿಲ್ಲೆಯ ಬ್ರಹ್ಮಾವರದ ಉಪ್ಪೂರು ತೆಂಕಬೆಟ್ಟುನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಎಷ್ಟೇ ಹುಡುಕಾಟ ನಡೆಸಿದರೂ ಬಾಲಕ ಪತ್ತೆಯಾಗಿರಲಿಲ್ಲ. ಇಂದು, ಗುರುವಾರ ಬೆಳಗ್ಗೆ ಮನೆ ಸಮೀಪದ ನೀರಿನ ಹೊಂಡದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಜಾರಿ ನೀರಿನ ಹೊಂಡಕ್ಕೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ನಾರ್ಮನ್ ಅವರ ಕುಟುಂಬ ದುಬೈಲ್‌ನಲ್ಲಿದ್ದು ರಜೆ ನಿಮಿತ್ತ ಇತ್ತೀಚಿಗೆ ಊರಿಗೆ ಆಗಮಿಸಿತ್ತು ಎಂದು ಹೇಳಲಾಗಿದೆ. ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement