ಮಂಡ್ಯ: ಆಟೊ- ಕಾರು ಮಧ್ಯೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಮಂಡ್ಯ ಜಿಲ್ಲೆಯ ಮಳವಳ್ಳಿ ಹೊರವಲಯದ ಕಣಿಗಲ್ ಗೇಟ್ ಬಳಿ ಬುಧವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.
ವೇಗವಾಗಿ ಬಂದ ಕಾರು, ಆಟೋಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರವಿಕುಮಾರ(50), ಭಾಸ್ಕರ (48) ಮತ್ತು ಆಟೊ ಚಾಲಕ ಶ್ರೀನಿವಾಸ (35) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಆಟೋ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಆಟೋ ಮೇಲೆಯೇ ಕಾರು ಬಿದ್ದಿದೆ. ಈ ವೇಳೆ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮಳವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement