ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಗೆ ಭಾರತದ ತಂಡ ಪ್ರಕಟ: ಕೊಹ್ಲಿ, ಬುಮ್ರಾಗೆ ವಿಶ್ರಾಂತಿ

ನವದೆಹಲಿ: ಜುಲೈ 29 ರಿಂದ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ T20 ಸರಣಿಗಾಗಿ ಬಿಸಿಸಿಐ (BCCI) ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿ ಮುನ್ನಡೆಸಲಿದ್ದಾರೆ.
ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಪಂದ್ಯಾವಳಿಗೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇತ್ತೀಚೆಗೆ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಅವರನ್ನು ಫಿಟ್‌ನೆಸ್‌ಗೆ ಒಳಪಟ್ಟು 18 ಮಂದಿಯ ತಂಡದಲ್ಲಿ ಆಯ್ಕೆ ಮಾಡಲಾಗಿದೆ.

ಜೂನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯಲ್ಲಿ ಕುಲದೀಪ್ ಕೈಗೆ ಗಾಯ ಮಾಡಿಕೊಂಡಿದ್ದರು. ರವಿಚಂದ್ರನ್ ಅಶ್ವಿನ್ ಅವರು ತಂಡಕ್ಕೆ ಮರಳಿದ್ದಾರೆ ಮತ್ತು T20 ವಿಶ್ವಕಪ್‌ಗೆ ತಮ್ಮ ಸ್ಥಾನವನ್ನು ಕಾಯ್ದಿರಿಸಲು ನೋಡುತ್ತಿದ್ದಾರೆ.ಆಯ್ಕೆ ಸಮಿತಿ ಬುಮ್ರಾಗೆ ವಿಶ್ರಾಂತಿ ನೀಡಿದೆ. ಬುಮ್ರಾ ತಡೆರಹಿತ ಕ್ರಿಕೆಟ್ ಆಡುತ್ತಿದ್ದಾರೆ ಮತ್ತು ಅವರಿಗೆ ವಿಶ್ರಾಂತಿ ನೀಡುವುದು ಉತ್ತಮ ಎಂದು ಭಾವಿಸಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್*, ಭುವನೇಶ್ವರ್ ಕುಮಾರ್ ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement