ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ : ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಹಾಸನ: ರಾಜಧಾನಿ ಬೆಂಗಳೂರು ಹಾಗೂಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್‌ನಲ್ಲಿ ಇಂದು, ಗುರುವಾರ ಮತ್ತೆ ಭೂಕುಸಿತವಾಗಿದೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದ ರಸ್ತೆ, ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಲಘು ವಾಹನಗಳಿಗೆ ಏಕ ಮುಖ ಸಂಚಾರದಂತೆ ಚಲಿಸಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್‌ ಭಾಯಲ್‌, ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ಪ್ರಯಾಣಿಕ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ಎಲ್ಲ ರೀತಿಯ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ಈ ಪ್ರದೇಶದಲ್ಲಿ ನಿರ್ಬಂಧಿಸಲಾಗಿದೆ.
ವಾರದ ಹಿಂದೆ ರಸ್ತೆ ಕುಸಿದ ಸ್ಥಳಕ್ಕೆ ಲೋಕೋಪಯೋಗಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈಗ ಮತ್ತೆ ಭೂಕುಸಿತ ಉಂಟಾಗಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು, ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement