ಹಿರಿಯ ನಟ ಅನಂತ ನಾಗ್‌ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌

ಕೋಲಾರ: ಕನ್ನಡದ ಹಿರಿಯ ನಟ ಅನಂತ ನಾಗ್, ಶಹನಾಯಿ ವಾದಕ ಬಾಳೇಶ ಭಜಂತ್ರಿ ಹಾಗೂ ಎಂಜಿನಿಯರ್ ಶರದ್‌ ಶರ್ಮ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪ್ರಕಟಿಸಿದೆ.
ಗುರುವಾರ ಮಾಹಿತಿ ನೀಡಿದ ವಿಶ್ವವಿದ್ಯಾಲಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಅವರು, ನಗರ ಹೊರವಲಯದ ನಂದಿನಿ ಪ್ಯಾಲೇಸ್‍ನಲ್ಲಿ ಶುಕ್ರವಾರ ಜುಲೈ 15ರಂದು, ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದೆ. ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಪದವಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಕನ್ನಡದ ಹಿರಿಯ ಅನಂತ ನಾಗ್‌ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಹೆಸರು ಮಾಡಿದ್ದಾರೆ. ರಾಜ್ಯದ ಸಾಂಸ್ಕೃತಿಕ ರಂಗಕ್ಕೆ ಅವರ ಅಪಾರ ಕೊಡುಗೆ ಪರಿಗಣಿಸಿ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ.

ಬಾಳೇಶ ಭಜಂತ್ರಿ ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯವರು ಉಸ್ತಾದ್‌ ಬಿಸ್ಮಿಲ್ಲಾ ಖಾನ್ ಬಳಿ ಶಹನಾಯಿ ಅಭ್ಯಾಸ ಮಾಡಿದವರು, ಅವರ ಜೊತೆ ಶಹನಾಯಿ ನುಡಿಸಿದ್ದಾರೆ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಶರದ್‌ ಶರ್ಮ ‘ಐ ಸ್ಪಿರ್ಟ್‌’ ಸಂಸ್ಥೆಯ ಸಹ ಸಂಸ್ಥಾಪಕರು. ದೇಶದ ಡಿಜಿಟಲ್‌ ವ್ಯವಹಾರದಲ್ಲಿ ಕ್ರಾಂತಿ ಮಾಡಿರುವ ಯುಪಿಐ ಪೇಮೆಂಟ್‌ ಗೇಟ್‌ವೇ ಯಶಸ್ಸಿನಲ್ಲಿ ಇವರ ಪಾತ್ರವಿದೆ. ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿಪರಿಗಣಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಬೆಂಗಳೂರಿನ ಜಯದೇವ ಹೃದ್ರೋಗ ಹಾಗೂ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ. 41 ಅಭ್ಯರ್ಥಿಗಳಿಗೆ ಚಿನ್ನದ ಪದಕ ‍ಹಾಗೂ ಒಟ್ಟು 18,064 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುಗುತ್ತದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement