ಅತಿವೃಷ್ಟಿ, ಪ್ರವಾಹದಿಂದ ‘ಬೆಳೆಹಾನಿ: ಇನ್ ಪುಟ್ ಸಬ್ಸಿಡಿ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಷ್ಕೃತ ದರದಲ್ಲಿ ಇನ್ ಪುಟ್ ಸಬ್ಸಿಡಿ ಹೆಚ್ಚಳ ಮಾಡಿ ಆದೇಶಿಸಿದೆ.
ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದು, ರಾಜ್ಯದಲ್ಲಿ 2022ನೇ ಸಾಲಿನ ಮುಂಗಾರು ರುತುವಿನಲ್ಲಿ ಬಿದ್ದ ಭಾರೀ ಮಳೆಯಿಂದ ಹಾಗೂ ನದಿ ನೀರಿನ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಿಂದ ವರದಿಯಾಗಿದೆ.

ಈ ಹಿನ್ನಲೆಯಲ್ಲಿ ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್ ಪುಟ್ ಸಬ್ಸಿಡಿ ಮೊತ್ತವನ್ನು ಪರಿಷ್ಕರಿಸಲಾಗಿದೆ ಎಂದು ಆದೇಶಿಸಿದೆ.
ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ ಪರಿಷ್ಕೃತ ಇನ್‌ಪುಟ್ ಸಬ್ಸಿಡಿ ದರ

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಮಳೆಯಾತ್ರಿತ – .6,800 ರೂ.ಗಳಿಂದ 13,600 ರೂ.ಗಳಿಗೆ ಹೆಚ್ಚಳ
ನೀರಾವರಿ – 13,500 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಳ
ಬಹುವಾರ್ಷಿಕ – 18,000 ರೂ.ಗಳಿಂದ .28,000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement