ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ: ಜೆಡಿಎಸ್‌ ಸರ್ವಾನುಮತದ ನಿರ್ಣಯ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ.
ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ನಡೆದ ನಾಯಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ ಐಸೋಲೇಷನ್ ಆಗಿರುವ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.

ಮೊತ್ತ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ದ್ರೌಪದಿ ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿ ಇಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಪಕ್ಷ ಎನ್ನುವುದು ಮಾನದಂಡವಲ್ಲ, ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ದ್ರೌಪದಿ ಮುರ್ಮು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ಎಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದರು. ನಂತರ ಬೆಂಗಳೂರಿಗೆ ಭೇಟಿ ನೀಡಿದಾಗ ಖುದ್ದು ಅವರೇ ತೆರಳಿ ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ತೀರ್ಮಾನ ಕೈಗೊಂಡಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement