ಕೊಡಗಿನಲ್ಲಿ ಬೆಟ್ಟ ಕುಸಿತದ ಆತಂಕ: 80 ಕುಟುಂಬಗಳ ಸ್ಥಳಾಂತರ

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಿಂದಾಗಿ ಬೆಟ್ಟ ಕುಸಿತದ ಆತಂಕ ಎದುರಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 80 ಕುಟುಂಬಗಳ 221 ಮಂದಿಯನ್ನು ಸ್ಥಳಾಂತರಿಸಲಾಗಿದೆ.
ಅಯ್ಯಪ್ಪ ಬೆಟ್ಟ ಹಾಗೂ ಮಲೆತಿರಿಕೆ ಬೆಟ್ಟಗಳ ಬುಡದಲ್ಲಿ ವಾಸಿಸುತ್ತಿರುವ ಸುಮಾರು 80 ಕುಟುಂಬಗಳ 221 ಮಂದಿಯನ್ನು ಅವರ ವಾಸಸ್ಥಾನಗಳಿಂದ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ.
ನಿರಂತರ ಮಳೆಯಿಂದಾಗಿ ಎರಡು ಬೆಟ್ಟಗಳು ಕುಸಿತದ ಆತಂಕ ಉಂಟಾಗಿದ್ದು, ಜನ ಭಯದಿಂದಲೇ ದಿನದೂಡುವಂತಾಗಿದೆ. ಅಯ್ಯಪ್ಪ ಬೆಟ್ಟ ಮತ್ತು ಮಲೆತಿರಿಕೆ ಬೆಟ್ಟ ಕುಸಿಯುವ ಲಕ್ಷಣಗಳು ಗೋಚರಿಸಿದ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement