ಖಾನಾಪುರ: ಮನೆ ಗೋಡೆ ಕುಸಿದು ಬಾಲಕ ಸಾವು

ಖಾನಾಪುರ :ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಲಿಂಗನಮಠ ಗ್ರಾಮ ಪಂಚಾಯತ ವ್ಯಾಪ್ತಿಯ ಚುಂಚವಾಡದಲ್ಲಿ ಗುರುವಾರ ನಡೆದಿದೆ.
ಮೃತಪಟ್ಟವನನ್ನು ಅನಂತು ಧರ್ಮೇಂದ್ರ ಪಾಶೆಟ್ಟಿ(15) ಎಂಬ ಎಂದು ಗುರುತಿಸಲಾಗಿದೆ. ವಾಸಿಸುವ ಮನೆಯಲ್ಲಿಯೇ ದನಕರುಗಳನ್ನು ಕಟ್ಟುತ್ತಿದ್ದರು. ಗುರುವಾರ ರಾತ್ರಿ ಹತ್ತರ ಸುಮಾರಿಗೆ ಕೊಟ್ಟಿಗೆಯಲ್ಲಿರುವ ದನ ಕರುಗಳಿಗೆ ಮೇವು ಹಾಕಲು ಹೋದಾಗ ಗೋಡೆ ಆತನ ಮೇಲೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement