ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಪೂರಕ ಪರೀಕ್ಷೆಯು ಆಗಸ್ಟ್‌ 12ರಿಂದ ಆರಂಭವಾಗಿ ಆಗಸ್ಟ್‌ 25ರ ವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು 12-08-2022 ರಿಂದ 25-08-2022ರ ವರೆಗೆ ನಡೆಸಲು ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

12-08-2022 – ಕನ್ನಡ, ಅರೇಬಿಕ್
13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
16-08-2022 – ಹಿಂದಿ
17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
18-08-2022 – ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
19-08-2022 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
22-08-2022 – ಇಂಗ್ಲಿಷ್‌
23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ
24-08-2022- ಇತಿಹಾಸ, ಸಂಖ್ಯಾಶಾಸ್ತ್ರ
25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement