ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಶುಕ್ರವಾರ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶನಿವಾರದಿಂದ 4 ದಿನಗಳ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಕರಾವಳಿ ಸಮುದ್ರ ತೀರದಲ್ಲಿ ಜೋರಾಗಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ಪ್ರತಿ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ನಾಳೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲೂ ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆಯಿದ್ದು, ಮುಂದಿನ 3 ದಿನ ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲೂ ಮುಂದಿನ 4 ದಿನ ಮಳೆ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ.
ಹವಾಮಾನ ಇಲಾಖೆಯ ಮಳೆ ವರದಿಯ ಪ್ರಕಾರ ಕರಾವಳಿಯ 9 ಕಡೆ ಭಾರೀ ಮಳೆ ದಾಖಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ನೋಟಾದಲ್ಲಿ 10 ಸೆಂಮೀ ಹಾಗೂ ಗುಂಜೆಯಲ್ಲಿ 7 ಸೆ.ಮೀ ಮಳೆ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 24 ಸೆಂಮೀ, ಕೊಡಗು ಜಿಲ್ಲೆಯ ಭಾಗಮಂಡಲ 20 ಸೆಂಮೀ, ಹಾಸನ ಜಿಲ್ಲೆಯ ಸಕಲೇಶಪುರ 13 ಸೆಂಮೀ ಮಳೆ ದಾಖಲಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement