ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ಸಮಯದಲ್ಲಿ ಫೋಟೋ-ವೀಡಿಯೊ ಮಾಡುವಂತಿಲ್ಲ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾರ್ಜ ಸರ್ಕಾರದ ಇಲಾಖೆಗಳ ಕಚೇರಿ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ವೀಡಿಯೋ ಮಾಡುವುದು ಅಥವಾ ಫೋಟೋ ತೆಗೆಯುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಸಾರ್ವಜನಿಕರು ಆಗಮಿಸುವುದು ಸಾಮಾನ್ಯ. ಆದರೆ ಇಂತಹ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳ ಕಾರ್ಯ ನಿರ್ವಹಿಸುವಾಗ ಕೆಲವು ಖಾಸಗಿ ವ್ಯಕ್ತಿಗಳು ಬಂದು ಫೋಟೋ/ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.
ಹಾಗೂ ಅವುಗಳನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರ ಮತ್ತು ಇಲಾಖೆ ಘನತೆಗೆ ಕುಂದುಬರುವಂತೆ ಮಾಡಲಾಗುತ್ತಿದೆ. ಮಹಿಳಾ ನೌಕರರಿಗೆ ಇದರಿಂದ ತೀರಾ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಕಚೇರಿ ಸಮಯದಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡುವುದು ನಿಷೇಧಿಸಲಾಗಿದೆ ಎಂದು ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.
ಅನುಮತಿ ಇಲ್ಲದೆ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ತಡೆಯಬೇಕು ಎಂದು ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರು ಈ ಹಿಂದೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement