ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ : ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರ‍್ಯಾಲಿ

ಬೆಂಗಳೂರು : ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ರ‍್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಒಂದು ವರ್ಷದ ಸಾಧನೆಯ ಸರ್ಕಾರಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ ಹಾಗೂ ಪಕ್ಷದ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸಚಿವ ಸಂಪುಟದ ಎಲ್ಲ ಸಚಿವರು ಚಿಂತನಾ ಸಭೆ ಮಾಡಿದ್ದೇವೆ. ಸಭೆಯಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯವಾಗಿ ಮುಂದೆ ಹೋಗಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಲು ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಪ್ರವಾಹ: ರಕ್ಷಣೆ, ಪುನರ್ವಸತಿಗೆ ಆದ್ಯತೆ
ಪ್ರವಾಹದ ಪರಿಸ್ಥಿತಿ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಮಾತನಾಡಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ಕಾಳಜಿ ಕೇಂದ್ರಗಳನ್ನು ತಕ್ಷಣವೇ ತೆರೆಯಬೇಕು ಹಾಗೂ ಬೆಳೆ ನಾಶದ ಸಮೀಕ್ಷೆ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇವೆಲ್ಲದಕ್ಕೂ ಸರ್ಕಾರದಿಂದ ಮೂಲಭೂತ ಸೌಕರ್ಯಗಳ ಪುನಃ ಸ್ಥಾಪನೆಗೆ ತುರ್ತಾಗಿ 500 ಕೋಟಿ ರೂಪಾಯಿ ಹಣ ಒದಗಿಸಲಾಗಿದೆ, ಇದು ತಕ್ಷಣದ ಪುನರ್ವಸತಿ ಕೆಲಸಗಳಿಗೆ ನೀಡಿದ್ದು, ನಂತರ ಶಾಶ್ವತ ಅಭಿವೃದ್ಧಿ ಕಾರ್ಯಗಳಿಗೆ ಬೇರೆಯ ಯೋಜನೆಗಳನ್ನು ಸರ್ಕಾರ ಸಿದ್ಧಪಡಿಸಲಿದೆ ಎಂದು ಮಾಹಿತಿ ನೀಡಿದರು.
ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಸರ್ಕಾರ ಪರಿಹಾರವನ್ನು ಹೆಚ್ಚಿಸಿದೆ, ಈ ಬಾರಿಯೂ ಕೇಂದ್ರ ಸರ್ಕಾರ ಬೆಳೆನಾಶಕ್ಕೆ ನಿಗದಿ ಪಡಿಸಿದ ಪರಿಹಾರಕ್ಕಿಂತ ಹೆಚ್ಚು ಹಣ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರವಾಹ ಸಂದರ್ಭದಲ್ಲಿ ತೊಂದರೆಗೀಡಾದವರಿಗೆ ಸರ್ಕಾರ ಕೂಡಲೇ ಪರಿಹಾರ ನೀಡುತ್ತದೆ, ಜನರು ಆತಂಕಕ್ಕೆ ಒಳಗಾಬೇಕಿಲ್ಲ ಎಂದರು.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement