ರಾಜ್ಯದಲ್ಲಿ ಇಂದು ಹೊಸದಾಗಿ 1,374 ಕೊರೊನಾ ಪ್ರಕರಣಗಳು ದಾಖಲು, ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇಂದು, ಶನಿವಾರ 1,374 ತಾಜಾ ಕೊರೊನಾ ಪ್ರಕರಣಗಳು ದಾಖಲಾಗಿದೆ. ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ.
ಇದೇವೇಳೆ ರಾಜ್ಯದಲ್ಲಿ 777 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಧಾರವಾಡದಲ್ಲಿ ದಾಖಲಾಗಿದೆ. ರಾಜ್ಯದ 3 ಮರಣ ಪ್ರಕರಣ ಪೈಕಿ ಬೆಂಗಳೂರು ನಗರದಲ್ಲಿ ಎರಡು ಹಾಗೂ ಬಳ್ಳಾರಿಯಲ್ಲಿ ಒಂದು ವರದಿಯಾಗಿದೆ. ಇಂದಿನ ಪಾಸಿಟಿವಿಟಿ ರೇಟ್ ಶೇ.4.86 ಕ್ಕೆ ತಲುಪಿದೆ.
ರಾಜ್ಯದಲ್ಲಿ ಇಂದು ಒಟ್ಟು 1,49,782 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement