ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವೀಡಿಯೋ ಚಿತ್ರೀಕರಣ ನಿಷೇಧದ ಆದೇಶ ವಾಪಸ್…!

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವೀಡಿಯೊ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ನಂತರ ತನ್ನ ಆದೇಶ ವಾಪಸ್ ಪಡೆದಿದೆ.
ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ 15ರ ತಡರಾತ್ರಿ ಆದೇಶ ಹಿಂಪಡೆದಿದೆ.
ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯದಲ್ಲಿ ಸಾರ್ವಜನಿಕರು ಫೋಟೊ ಹಾಗೂ ವೀಡಿಯೊ ಚಿತ್ರೀಕರಣ ಮಾಡುವಂತಿಲ್ಲ ಎಂದು ಆಡಳಿತ ಸುಧಾರಣಾ ಇಲಾಖೆ ನಿನ್ನೆ, ಶುಕ್ರವಾರ ಮಧ್ಯಾಹ್ನ ಆದೇಶ ಹೊರಡಿಸಿತ್ತು. ಕೆಲವರು ಸರ್ಕಾರಿ ಕಚೇರಿಗಳ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದಾಗಿ ಸರ್ಕಾರ ಹೇಳಿತ್ತು.

ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ. ಹಿಗಾಗಿ ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವೀಡಿಯೊ ಮಾಡುವುದನ್ನು ನಿಷೇಧಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಸರ್ಕಾರ ಈ ಆದೇಶ ಹೊರಡಿಸಿತ್ತು. ಆದರೆ ಈ ಆದೇಶಕ್ಕೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆದೇಶವನ್ನು ಹಿಂಪಡೆದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement