ಕಾಶ್ಮೀರ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಅಧಿಕಾರಿ ಹುತಾತ್ಮ

ಕಾಶ್ಮೀರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿಯಲ್ಲಿ ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ವಿನೋದ್ ಕುಮಾರ್ ಗಾಯಗೊಂಡಿದ್ದು, ನಂತರ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ಕರೆದೊಯ್ಯದ ನಂತರ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದರು.
ಭಾನುವಾರ ಮಧ್ಯಾಹ್ನ 2:20ರ ಸುಮಾರಿಗೆ ಈ ದಾಳಿ ನಡೆದಿದ್ದು, ದಕ್ಷಿಣ ಕಾಶ್ಮೀರದ ಗಂಗೂ ಪ್ರದೇಶದಲ್ಲಿ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಆಗಮಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ದಕ್ಷಿಣ ಕಾಶ್ಮೀರದ ಪುಲ್ವಾಮಾದ ಗಂಗೂ ಕ್ರಾಸಿಂಗ್ ಪ್ರದೇಶದ ಬಳಿ ಭಯೋತ್ಪಾದಕರು ಹತ್ತಿರದ ಸೇಬು ತೋಟಗಳಲ್ಲಿ ಅಡಗಿಕೊಂಡು ಭದ್ರತಾ ಪಡೆಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದರು.
ತೋಟಗಳು ಸೇರಿದಂತೆ ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ವಕ್ತಾರರು ಹೇಳಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಧರ್ಮಾಧಾರಿತ ಜನಸಂಖ್ಯೆ ಅಸಮತೋಲನ ಕಡೆಗಣಿಸುವ ವಿಚಾರವಲ್ಲ, ಎಲ್ಲ ಧರ್ಮಕ್ಕೆ ಅನ್ವಯವಾಗುವ ಜನಸಂಖ್ಯಾ ನೀತಿ ಜಾರಿ ಮಾಡಿ : ಮೋಹನ​ ಭಾಗವತ್​

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement