ಉಪರಾಷ್ಟ್ರಪತಿ ಚುನಾವಣೆ: ಕೇಂದ್ರದ ಮಾಜಿ ಸಚಿವೆ ಮಾರ್ಗರೆಟ್ ಆಳ್ವ ಪ್ರತಿಪಕ್ಷಗಳ ಅಭ್ಯರ್ಥಿ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವೆ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವ ಅವರು ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ನಾವು ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ ಬಾರಿ ಅವರು ನಮ್ಮ ಜಂಟಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸಿದ್ದರು” ಎಂದು ಶರದ್ ಪವಾರ್ ತಿಳಿಸಿದ್ದಾರೆ.
ಈ ಸರ್ವಾನುಮತದ ನಿರ್ಧಾರಕ್ಕೆ 17 ಪಕ್ಷಗಳು ಮುಂದಾಗಿವೆ. ಅವರನ್ನು ಕಣಕ್ಕಿಳಿಸುವುದು ನಮ್ಮ ಸಾಮೂಹಿಕ ಚಿಂತನೆಯಾಗಿದ್ದು ಆಳ್ವಾ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಶರದ್‌ ಪವಾರ್ ತಿಳಿಸಿದ್ದಾರೆ.

ವಿರೋಧ ಪಕ್ಷಗಳು ಮಾರ್ಗರೆಟ್ ಆಳ್ವಾ ಅವರನ್ನು ಜಂಟಿ ಉಪರಾಷ್ಟ್ರಪತಿ ಅಭ್ಯರ್ಥಿ ಎಂದು ಹೆಸರಿಸಿದ ನಂತರ, ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಈ ಚುನಾವಣೆಯಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ತಿಳಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶನಿವಾರ, ಬಿಜೆಪಿಯು ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್‌ ಅವರನ್ನು ಎನ್‌ಡಿಎ ಆಯ್ಕೆ ಎಂದು ಘೋಷಿಸಿದೆ. ಅವರ ಆಯ್ಕೆಯ ಕುರಿತು ಚರ್ಚಿಸಲು ದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಸಿದ ನಂತರ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಈ ಘೋಷಣೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವದಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಆಗಸ್ಟ್ 11ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ದಂಕರ್ ಹಾಗೂ ಮಾರ್ಗರೆಟ್ ಆಳ್ವ ಪೈಪೋಟಿ ನಡೆಸಲಿದ್ದಾರೆ.

ಏಪ್ರಿಲ್ 14, 1942ರಲ್ಲಿ ಮಂಗಳೂರಿನಲ್ಲಿ ಜನಿಸಿದ ಮಾರ್ಗರೇಟ್ ಆಳ್ವ ಬಿಎ ಪದವಿ ನಂತರ ಬೆಂಗಳೂರಿನ ಮೌಂಟ್ ಕಾರ್ಮೆಲ್‌ ಕಾಲೇಜು ಹಾಗೂ ಮತ್ತು ಸರ್ಕಾರಿ ಲಾ ಕಾಲೇಜಿನಿಂದ ಎಲ್ಎಲ್‌ಬಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದರು.
ವಕೀಲರಾಗಿ ವೃತ್ತಿ ಜೀವನ ಆರಂಭ. 1964ರಲ್ಲಿ ನಿರಂಜನ್ ಆಳ್ವ ಜತೆ ವಿವಾಹ. ಈ ದಾಂಪತ್ಯದಲ್ಲಿ ಒಬ್ಬ ಮಗಳು ಮತ್ತು ಮೂವರು ಪುತ್ರರಿದ್ದಾರೆ. ನಾಲ್ಕು ಬಾರಿ ರಾಜ್ಯಸಭೆ ಮತ್ತು ಒಂದು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
1974ರಲ್ಲಿ ಕಾಂಗ್ರೆಸ್​​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 42ನೇ ವಯಸ್ಸಿನಲ್ಲಿ ಕೇಂದ್ರ ಸಚಿವೆ. ರಾಜೀವ್ ಗಾಂಧಿ ಮತ್ತು ಪಿವಿ ನರಸಿಂಹ ರಾವ್ ಸಚಿವ ಸಂಪುಟದಲ್ಲಿ ಸಚಿವೆಯಾಗಿ ಸೇವೆ ಸಲ್ಲಿಸಿದ್ದರು

ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವ 1999ರಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಗೆಲುವು ಸಾಧಿಸಿ ಲೋಕಸಭೆಗೆ  ಆಯ್ಕೆಯಾಗಿದ್ದರು. 1969ರಲ್ಲಿ ರಾಜಕೀಯ ಪ್ರವೇಶ ಮಾಡಿದರು. ಇಂದಿರಾ ಗಾಂಧಿ ಸರ್ಕಾರದಲ್ಲಿ ಕರ್ನಾಟಕ ಕಾಂಗ್ರೆಸ್‌ನ ಪ್ರಬಲ ನಾಯಕಿಯಾಗಿ ಬೆಳದ ಮಾರ್ಗರೆಟ್ , 1975 ರಿಂದ 1977ರ ವರೆಗೆ ಆಲ್ ಇಂಡಿಯಾ ನ್ಯಾಷನಲ್ ಕಾಂಗ್ರೆಸ್(AICC) ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. 1978 ರಿಂದ 1980ರ ವರೆಗೆ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 1974ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಆಳ್ವ, 1984 ರಿಂದ 85ರ ವರೆಗೆ ಕೇಂದ್ರದ ರಾಜ್ಯ ಖಾತ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಯುವಜನ, ಕ್ರೀಡೆ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ, ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವೆ ಸೇರಿದಂತೆ ಹಲವು ಖಾತೆಗಳನ್ನು ನಿರ್ವಹಿಸಿದ್ದಾರೆ.

ಪ್ರಮುಖ ಸುದ್ದಿ :-   2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement