ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್‌: ಪೊಲೀಸರಿಂದ ಫೈರಿಂಗ್

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಜರಿಗೆ ತೆರಳುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ.
14ಕ್ಕೂ ಹೆಚ್ಚು ಪ್ರಕರಣದ ಆರೋಪಿ ರೌಡಿಶೀಟರ್ ಮುಕ್ತಾರ್ ಎಂಬವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಹಲವು ವರ್ಷಗಳಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ. ಆದರೆ ಶನಿವಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಆತನನ್ನು ಬಂಧಿಸಿದ್ದರು.

ಇಂದು, ಭಾನುವಾರ ಮುಂಜಾನೆ ಬೈಕಿನ ಮಹಜರಿಗೆಂದು ಕೊಣಾಜೆ ಸಮೀಪದ ಅಸೈಗೋಳಿಗೆ ಕರೆದೊಯ್ದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಠಾಣಾಧಿಕಾರಿ ಸಂದೀಪ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ. ಫೈರಿಂಗ್ ವೇಳೆ ಉಳ್ಳಾಲ ಠಾಣಾ ಪೊಲೀಸ್ ಸಿಬ್ಬಂದಿ ವಾಸುದೇವ ಹಾಗೂ ಅಕ್ಬರ್ ಎಂಬುವವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಮೂವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement