ಮಧ್ಯಪ್ರದೇಶದಲ್ಲೂ ಹೆಜ್ಜೆ ಇಟ್ಟ ಎಎಪಿ: ಸಿಂಗ್ರೌಲಿ ಮೇಯರ್ ಸ್ಥಾನ ಗೆದ್ದ ಪಕ್ಷದ ರಾಣಿ ಅಗರವಾಲ್

ಭೋಪಾಲ್‌: ರಾಣಿ ಅಗರವಾಲ್ ಸಮಾಜ ಸೇವೆ ಮತ್ತು ರಾಜಕೀಯದಲ್ಲಿ ದೀರ್ಘಕಾಲ ಸಂಬಂಧ ಹೊಂದಿದ್ದಾರೆ ಮತ್ತು 2014 ರಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಮೊದಲ ಚುನಾವಣೆಯಲ್ಲಿ ಗೆದ್ದರು. ಅಗರವಾಲ್ ಅವರು ಸಿಂಗ್ರೌಲಿ ಕ್ಷೇತ್ರದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಆದರೆ ಸೋತಿದ್ದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ, ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರೋಡ್ ಶೋನಲ್ಲಿ ಅವರ ಪರವಾಗಿ ಪ್ರಚಾರ ಮಾಡಿದ್ದರು.

ಅಗರವಾಲ್ ಅವರ ವಿಜಯದ ನಂತರ, ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್‌ನಲ್ಲಿ ಅವರನ್ನು ಅಭಿನಂದಿಸಿದ್ದಾರೆ, “ಸಿಂಗ್ರೌಲಿ ಮೇಯರ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ರಾಣಿ ಅಗರವಾಲ್ ಅವರು, ಇತರ ವಿಜೇತರು ಮತ್ತು ಪಕ್ಷದ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ. ನೀವು ಜನರಿಗಾಗಿ ಶ್ರಮಿಸುವುದನ್ನು ಮುಂದುವರಿಸಬೇಕು. ಆಮ್ ಆದ್ಮಿ ಪಕ್ಷದ ಪ್ರಾಮಾಣಿಕ ರಾಜಕಾರಣವನ್ನುದೇಶಾದ್ಯಂತ ಜನರು ಇಷ್ಟಪಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಬುರ್ಹಾನ್‌ಪುರ, ಸತ್ನಾ ಮತ್ತು ಖಾಂಡ್ವಾದಲ್ಲಿ ಬಿಜೆಪಿಯ ಮೇಯರ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜುಲೈ 6 ರಂದು ರಾಜ್ಯದ 11 ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಭಾನುವಾರ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement