ರಾಜ್ಯದಲ್ಲಿ ಭಾನುವಾರ ಹೊಸದಾಗಿ 944 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಇಂದು, ಭಾನುವಾರ ಹೊಸದಾಗಿ 944 ಕೊರೊನಾ ಪ್ರಕರಣಗಳು ದಾಖಲಾಗಿವೆ ಹಾಗೂ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ ಇದೇವೇಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 7,569ಕ್ಕೆ ತಲುಪಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದೆ. ಗದಗ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಬೆಂಗಳೂರು ನಗರದಲ್ಲಿ 799 ಪ್ರಕರಣ ಪತ್ತೆಯಾಗಿದ್ದು, 625 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6,878ಕ್ಕೆ ತಲುಪಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಧಾರವಾಡದಲ್ಲಿ ಒಟ್ಟು 17 ಕೇಸ್ ಮತ್ತು ಏಕೈಕ ಮರಣ ವರದಿಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ ಶೇ. 3.25ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು, ಭಾನುವಾರ ಒಟ್ಟು 24,063 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement