ಅಮ್ರೇಲಿ(ಗುಜರಾತ್): ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಭಾನುವಾರ ಸಿಂಹಿಣಿಯೊಂದು ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಆರು ಜನರನ್ನು ಗಾಯಗೊಳಿಸಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾಫ್ರಾಬಾದ್ ಅರಣ್ಯ ವ್ಯಾಪ್ತಿಯ ಬಾಬರ್‌ಕೋಟ್ ಗ್ರಾಮದಲ್ಲಿ ಬೆಳಗ್ಗೆ ಮೂವರು ಮತ್ತು ಸಂಜೆ ರಸ್ತೆ ಬದಿಯ ದಾಳಿಯಲ್ಲಿ ಅಷ್ಟೇ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಯಂತ್ ಪಟೇಲ್ ಮಾಹಿತಿ ನೀಡಿದ್ದಾರೆ.
ಒಂದೇ ಸಿಂಹಿಣಿ ಎರಡು ಕಡೆ ದಾಳಿ ನಡೆಸಿದೆ ಮತ್ತು ಅದನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದು ಅವರು ಹೇಳಿದರು.
ಮಾಜಿ ರಾಜುಲಾ ಶಾಸಕ ಹೀರಾ ಸೋಲಂಕಿ ಅವರು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತುರ್ತು ಪರಿಸ್ಥಿತಿಯ ಹೊರತು ಬಾಬ್ರಕೋಟ್ ಸುತ್ತಮುತ್ತಲಿನ ಪ್ರದೇಶಗಳಿಗೆ ಜನರು ಹೋಗಬೇಡಿ ಎಂದು ಕೇಳಿಕೊಂಡಿದ್ದಾರೆ. ಈ ಪ್ರದೇಶದಿಂದ ಸಿಂಹವನ್ನುಹಿಡಿಯಲು ಅರಣ್ಯ ಇಲಾಖೆ ಪ್ರಯತ್ನ ನಡೆಸುತ್ತಿದೆ ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ