ಬೆಂಗಳೂರಿನ ಡಿ.ಕೆ. ಶಿವಕುಮಾರ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್.ಆರ್.ನಗರದಲ್ಲಿರುವ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ತಂಡ​ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ನೀಡಲಾಗಿದೆ. ಅವರನ್ನೆಲ್ಲಾ ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ.

ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆಶಾಲಾ ಆಡಳಿತ ನಿನ್ನೆ ರಾತ್ರಿಯೇ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಲಾಗಿದ್ದು, ಭಾನುವಾರ ರಜೆಯಾದ ಕಾರಣ ಯಾರೂ ಗಮನಿಸಿರಲಿಲ್ಲ. ಇಂದು, ಸೋಮವಾರ ಶಾಲೆಗೆ ಆಗಮಿಸಿದಾಗ ಆಡಳಿತ ಮಂಡಳಿ ಪರಿಶೀಲಿಸಿ ಗಾಬರಿಯಾಗಿದೆ. ತಕ್ಷಣವೇ ಆರ್.ಆರ್.ನಗರ ಪೊಲೀಸರಿಗೆ ಮಾಹಿತಿ ನೀಡಿದೆ. ಅವರು ಸ್ಥಳಕ್ಕಾಗಮಿಸಿದ್ದು, ತಕ್ಷಣವೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement