ರಾಜ್ಯ ಸರ್ಕಾರದಿಂದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ.
ಬೆಸ್ಕಾಂ ಎಂಡಿಯಾಗಿದ್ದ ರಾಜೇಂದ್ರ ಚೋಳನ್ ಅವರನ್ನು ವರ್ಗಾವಣೆ ಮಾಡಿ, ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ. ಬೆಸ್ಕಾಂ ಎಂಡಿಯಾಗಿ ಮಹಾಂತೇಶ ಬೀಳಗಿ ಅವರನ್ನು ನೇಮಿಸಿದೆ.ಶ್ರೀನಿವಾಸ್ ಕೆ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಸುಂದರೇಶ ಬಾಬು ಎಂ ಅವರನ್ನು, ಕೊಪ್ಪಳ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕೆಎಸ್‌ಎಂಎಸ್‌ಸಿಎಲ್ ಎಂಡಿಯಾಗಿದ್ದ ನಾಗರಾಜ ಎನ್ ಎಂ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಕುಮಟಾ ಉಪ ವಿಭಾಗದ ಸಹಾಯಕ ಜಿಲ್ಲಾಧಿಕಾರಿಯಾಗಿದ್ದ ರಾಹುಲ್ ರತ್ನಂ ಪಾಂಡೆ ಅವರನ್ನು ವರ್ಗಾವಣೆ ಮಾಡಿ, ಅಪ್ಪರ್ ಕೃಷ್ಣಾ ಯೋಜನೆಯ ಜನರಲ್ ಮ್ಯಾನೇಜರ್ ಆಗಿ ನೇಮಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement