ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಪರಿಷತ್‌ ಸ್ಥಾನಕ್ಕೆ ಚುನಾವಣೆ ಘೋಷಣೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಮ್ಮ ವಿಧಾನ ಪರಿಷತ್​ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅಂದೇ ಸಾಯಂಕಾಲ 5 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ.

ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯು ಜುಲೈ 25ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್​ 1ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 4ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದಾಗಿದೆ.
ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿದ್ದ ಸಿ.ಎಂ.ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅವಧಿ 2024ರ ಜೂನ್‌ 17ರ ವರೆಗೂ ಇತ್ತು. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement