ಆನೆ ಹತ್ಯೆ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಯತ್ನಿಸಿದ ಆರೋಪ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮನೇಕಾ ಗಾಂಧಿ

ಬೆಂಗಳೂರು:  ಕೇಂದ್ರದ ಮಾಜಿ ಸಚಿವೆ ಹಾಗೂ ಸಂಸದೆ ಮನೇಕಾ ಗಾಂಧಿ ಅವರು ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಒತ್ತಡ ಹೇರಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಆನೆಯೊಂದನ್ನು ಕೊಲ್ಲಲಾಗಿತ್ತು. ಅಲ್ಲದೇ ಸತ್ತ ಆನೆ ದಂತವನ್ನು ಬೆಂಗಳೂರಿಗರ ತಂದು ಮಾರಾಟ ಮಾಡಲು ಪ್ರಯತ್ನಿಸಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು, ಆನೆಯನ್ನು ವಿದ್ಯುತ್‌ ಹರಿಸಿ ಕೊಂದಿರುವುದನ್ನು ಒಪ್ಪಿಕೊಂಡಿದ್ದರು. ಅರಣ್ಯ ಇಲಾಖೆಯ ಈ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಪತ್ರ ಬರೆದಿದ್ದಾರೆ. ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಾಸನ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. ಆದರೆ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್‌ಎಫ್‌ಒ ಪ್ರಯತ್ನ ಮಾಡಿದ್ದಾರೆ. ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಈ ಪ್ರಕರಣವನ್ನು ಪದೇಪದೇ ವರ್ಗಾಯಿಸಲು ಸಿಕೆ ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಪ್ರಜ್ವಲ್‌ ರೇವಣ್ಣ ಒತ್ತಡ ಹಾಕಿದ್ದಾರೆ. ಸಿಕ್ಕಿ ಬಿದ್ದ ಆರೋಪಿಗಳು ತನ್ನ ಪಕ್ಷದ ಬೆಂಬಲಿಗರು ಎಂಬ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಒತ್ತಡ ಹಾಕಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಧ್ಯಪ್ರವೇಶ ಮಾಡಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತಾಗಬೇಕು ಎಂದು ಜುಲೈ 18 ರಂದು ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಕಾಡಾನೆ ಕೊಂದು ಜಮೀನಿನಲ್ಲಿ ಹೂತು ಹಾಕಿ ಬೆಂಗಳೂರಿನಲ್ಲಿ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದರು. ಕರೆಂಟ್ ಶಾಕ್ ಕೊಟ್ಟು ಒಂಟಿ ಸಲಗವನ್ನು ಕೊಂದಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಅಲ್ಲಿನ ಸ್ಥಳೀಯ ಇಬ್ಬರ ಕೈವಾಡವೂ ಇದೆ ಎಂಬ ಆರೋಪವಿದೆ. ಜಮೀನಿನಲ್ಲಿ ಕೊಂದು ಹೂತು ಹಾಕಿರುವ ಪ್ರಮುಖ ಆರೋಪಿ ಪಕ್ಷದ ಕಾರ್ಯಕರ್ತನಾಗಿರುವ ಕಾರಣ ಆತನ ರಕ್ಷಣೆಗೆ ಹಾಗೂ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಜ್ವಲ್ ರೇವಣ್ಣ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳ ಮೇಲೆ ಮನೇಕಾ ಗಾಂಧಿಯವರು ಈ ಪತ್ರ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement