ಉಪರಾಷ್ಟ್ರಪತಿ ಚುನಾವಣೆ : ಮಾರ್ಗರೇಟ್ ಆಳ್ವಾ ನಾಮಪತ್ರ ಸಲ್ಲಿಕೆ

ನವದೆಹಲಿ : ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಅವರು ಇಂದು (ಮಂಗಳವಾರ ಜುಲೈ 19) ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್, ಸಿಪಿಐ ಎಂ ಪಕ್ಷದ ಸೀತಾರಾಮ್ ಯೆಚೂರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ರಾಜಸ್ಥಾನ ಮತ್ತು ಇತರ ರಾಜ್ಯಗಳ ಮಾಜಿ ಗವರ್ನರ್ ಮಾರ್ಗರೇಟ್‌ ಆಳ್ವಾ (80) ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ (71) ವಿರುದ್ಧ ಸ್ಪರ್ಧಿಸಿದ್ದಾರೆ. ಧನಕರ್‌ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸೋಮವಾರ ತಮ್ಮ ಪತ್ರಗಳನ್ನು ಸಲ್ಲಿಸಿದ್ದಾರೆ. ಧನಕರ್‌ ಅವರು ಉಪರಾಷ್ಟ್ರಪತಿ ಅಭ್ಯರ್ಥಿಯಾಗುವ ಮೊದಲು ಪಶ್ಚಿಮ ಬಂಗಾಳದ ಗವರ್ನರ್ ಆಗಿದ್ದರು.

ಬರುವ ಆಗಸ್ಟ್ ತಿಂಗಳ 10ರಂದು ಹಾಲಿ ಉಪರಾಷ್ಟ್ರಪತಿ ಆಗಿರುವ ವೆಂಕಯ್ಯ ನಾಯ್ಡು ಅವರ ಅಧಿಕಾರ ಅವಧಿಯು ಮುಕ್ತಾಯವಾಗಲಿದೆ. ಹೀಗಾಗಿ ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6ರಂದು ಮತದಾನ ನಡೆಯಲಿದೆ.
ಉಪರಾಷ್ಟ್ರಪತಿಗಳು ರಾಜ್ಯಸಭೆಯ ಅಧ್ಯಕ್ಷರೂ ಆಗಿರುತ್ತಾರೆ. ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement