ಕಡೆಗಣಿಸಿದ ಆರೋಪ: ಉತ್ತರ ಪ್ರದೇಶ ಸಿಎಂ ಯೋಗಿ ಸಂಪುಟಕ್ಕೆ ರಾಜೀನಾಮೆ ನೀಡಿದ ಸಚಿವ..?! ಮತ್ತೊಬ್ಬ ಸಚಿವರಿಗೆ ವರ್ಗಾವಣೆ ಬಗ್ಗೆ ಅಸಮಾಧಾನ

ಲಕ್ನೊ: ತಮ್ಮ ಆದೇಶಗಳನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ (MoS) ದಿನೇಶ್ ಖತಿಕ್ ಬುಧವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಹಸ್ತಿನಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಖತಿಕ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಯೋಗಿ ಸರ್ಕಾರದಿಂದ ರಾಜೀನಾಮೆ ಬಗ್ಗೆ ಯಾವುದೇ ದೃಢೀಕರಣವಿಲ್ಲ. ತನ್ನ ಜಲಶಕ್ತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ತನ್ನ ಇಲಾಖೆಯ ಅಧಿಕಾರಿಗಳು ತನ್ನನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ, ಖತಿಕ್ ಅವರು ಕೇಂದ್ರ ಗೃಹ ಸಚಿವರಿಗೆ ಪತ್ರವೊಂದನ್ನು ಬರೆದ್ದಾರೆ, ಅದರ ಪ್ರತಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

100 ದಿನಗಳಿಂದ ತನಗೆ ಯಾವುದೇ ಕೆಲಸ ನೀಡಿಲ್ಲ ಎಂದು ಖತಿಕ್ ತನ್ನ ಪತ್ರದಲ್ಲಿ ಹೇಳಿಕೊಂಡಿದ್ದು, ತಾನು “ಸಮಾಜದ ದೀನದಲಿತ ವರ್ಗ”ಕ್ಕೆ ಸೇರಿದವನಾಗಿರುವುದರಿಂದ ಇಲಾಖೆಯ ಅಧಿಕಾರಿಗಳು ತನ್ನ ಮಾತನ್ನು ಕೇಳುತ್ತಿಲ್ಲ ಎಂದು ಹೇಳಿದ್ದಾರೆ.
ಯೋಗಿ ಸರ್ಕಾರದ ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಕೂಡ ತಮ್ಮ ಇಲಾಖೆಯ ವರ್ಗಾವಣೆ ವಿಷಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಡಬ್ಲ್ಯುಡಿ ಸಚಿವ ಜಿತಿನ್‌ ಪ್ರಸಾದ ಅವರ ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್‌ಡಿ) ಅನಿಲ್ ಕುಮಾರ್ ಪಾಂಡೆ ಅವರನ್ನು ವಜಾಗೊಳಿಸಲಾಗಿದ್ದು, ಇಲಾಖೆಯಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರದ ಮೇಲೆ ಇತರ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ಪ್ರಸಾದ ಅವರು ಅಸಮಾಧಾನಗೊಂಡಿದ್ದು, ಅಮಿತ್ ಶಾ ಅವರನ್ನು ಭೇಟಿ ಮಾಡಲು ಇಂದು ದೆಹಲಿಗೆ ತೆರಳುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement