ಚಂದ್ರಶೇಖರ ಜೋಶಿ, ಶಿವಶಂಕರೇಗೌಡ ಸೇರಿದಂತೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಐವರ ಹೆಸರು ಶಿಫಾರಸ್ಸು ಮಾಡಿದ ಸುಪ್ರೀಂ ಕೋರ್ಟ್‌ ಕೊಲಿಜಿಯಂ

ಬೆಂಗಳೂರು: ಐವರು ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ರಾಜ್ಯ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಟಿ ಜಿ ಶಿವಶಂಕರೇಗೌಡ ಮತ್ತು ಹಾಲಿ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿರುವ ಚಂದ್ರಶೇಖರ ಮೃತ್ಯುಂಜಯ ಜೋಶಿ, ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಅನಿಲ್‌ ಭೀಮಸೇನ ಕಟ್ಟಿ ಸೇರಿದಂತೆ ಐವರನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗುರುಸಿದ್ದಯ್ಯ ಬಸವರಾಜ ಮತ್ತು ರಾಜ್ಯ ಕೈಗಾರಿಕಾ ನ್ಯಾಯ ಮಂಡಳಿಯ ಮೇಲುಸ್ತುವಾರಿ ಅಧಿಕಾರಿ ಹಾಗೂ ಹಿಂದಿನ ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿದ್ದ ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ ಅವರನ್ನೂ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಜುಲೈ 19ರಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

ಚಂದ್ರಶೇಖರ ಮೃತ್ಯುಂಜಯ ಜೋಶಿ ಅವರು 2022ರ ಮೇ 4ರಂದು ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ್ದರು. ಇದಕ್ಕೂ ಮುನ್ನ ಅವರು ಬೆಳಗಾವಿ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿದ್ದರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗಗರಣಿ ಸಮೀಪದ ಕೂಗಲಬಳ್ಳಿಮಠದವರು.
ಅನಿಲ್‌ ಭೀಮಸೇನ ಕಟ್ಟಿ ಅವರು 2020ರ ಮೇ 11ರಿಂದ 2022ರ ಏಪ್ರಿಲ್‌ 30ರವರೆಗೆ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿದ್ದರು.
ಕರ್ನಾಟಕ ಹೈಕೋರ್ಟ್‌ 2022ರ ಜುಲೈ 1ರಂತೆ 45 ನ್ಯಾಯಮೂರ್ತಿಗಳನ್ನು ಹೊಂದಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 17 ನ್ಯಾಯಮೂರ್ತಿ ಹುದ್ದೆಗಳು ಖಾಲಿ ಇವೆ.

 

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement