ಹಿಜಾಬ್ ವಿವಾದದ ಬೆನ್ನಲ್ಲೇ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು

ಮಂಗಳೂರು: ಹಿಜಾಬ್ ವಿವಾದದ  ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಮ್ ಆಡಳಿತ ಸಂಸ್ಥೆಗಳು ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ ಎಂದು ವರದಿಯಾಗಿದೆ.
ಶಾಲಾ-ಕಾಲೇಜು ಮಾಡಿರುವ ನಿಯಮಗಳ ಅನ್ವಯ ಸಮವಸ್ತ್ರ ಧರಿಸುವುದು ಕಡ್ಡಾಯ, ಯಾವುದೇ ಧಾರ್ಮಿಕ ವಸ್ತ್ರಗಳಿಗೆ ಅವಕಾಶ ಇಲ್ಲ ಎಂದು ಸರ್ಕಾರ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದ ನಂತರ ಹಲವು ವಿದ್ಯಾರ್ಥಿನಿಯರು ತರಗತಿಗಳನ್ನಷ್ಟೇ ಅಲ್ಲದೇ, ಪರೀಕ್ಷೆಗಳನ್ನೂ ಬಹಿಷ್ಕರಿಸಿದ ಘಟನೆ ನಡೆಯಿತು.

ಸರ್ಕಾರದಿಂದ ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಇದಾದ ಬಳಿಕ ಈಗ ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪಿಯು ಬೋರ್ಡ್‍ಗೆ ಅರ್ಜಿ ಸಲ್ಲಿಸಿವೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಂದ 14 ಅರ್ಜಿಗಳ ಪೈಕಿ 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದಾಗಿದೆ ಎನ್ನಲಾಗಿದೆ. ಹೀಗಾಗಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಕೂಲವಾಗಲಿ ಎಂದು ಮುಸ್ಲಿಮರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳು ಪಿಯು ಕಾಲೇಜು ನಡೆಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿವೆ ಎನ್ನಲಾಗುತ್ತಿದೆ.
ಈ 14 ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಪಿಯು ಕಾಲೇಜು ಸ್ಥಾಪಿಸಲು ಈಗಾಗಲೇ ಅನುಮತಿ ನೀಡಲಾಗಿದೆ. ಒಂದು ಮುಸ್ಲಿಂ ಮತ್ತು ಮತ್ತು ಸುಬ್ರಹ್ಮಣ್ಯದ ಒಂದು ಮುಸ್ಲಿಮೇತರ ಆಡಳಿತದ ಕಾಲೇಜಿಗೆ ಅನುಮತಿ ಸಿಕ್ಕಿದೆ. ಉಳಿದ 12 ಅರ್ಜಿಗಳನ್ನು ಬಾಕಿ ಇಡಲಾಗಿದೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement