ಉತ್ತರ ಪ್ರದೇಶ ಸರ್ಕಾರಕ್ಕೆ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿ ದಾನ ಮಾಡಿದ ಮೊರಾದಾಬಾದ್ ವೈದ್ಯರು…!

ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನ ವೈದ್ಯರಾದ ಅರವಿಂದಕುಮಾರ್‌ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ…!
ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 600 ಕೋಟಿ ರೂ.ಗಳಾಗಿವೆ. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಆಸ್ತಿಯನ್ನು ದಾನ ಮಾಡಿದ ನಂತರ ಅವರು, ಸುಮಾರು 25 ವರ್ಷಗಳ ಹಿಂದೆ ಈ ನಿರ್ಧಾರ ತೆಗೆದುಕೊಂಡಿದ್ದೆ ಎಂದು ಹೇಳಿದರು.
ಲಾಕ್‌ಡೌನ್ ಸಮಯದಲ್ಲಿ ಮೊರಾದಾಬಾದ್‌ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದಕುಮಾರ್ ಗೋಯಲ್ ಜನರಿಗೆ ಉಚಿತ ಸೌಲಭ್ಯಗಳನ್ನು ಒದಗಿಸಿದ್ದರು. ಅವರು ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಮತ್ತು ಉತ್ತಮ ಚಿಕಿತ್ಸೆ ನೀಡುವ ಸೌಲಭ್ಯ ಸಹ ನೀಡಿದ್ದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್ ಮತ್ತು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಸೇರಿದಂತೆ ಡಾ.ಗೋಯಲ್ ಅವರನ್ನು ನಾಲ್ಕು ಬಾರಿ ರಾಷ್ಟ್ರಪತಿಗಳು ಸಮಾಜಸೇವಾ ಕಾರ್ಯಕ್ಕೆ ಗೌರವಿಸಿದ್ದಾರೆ. ಅರವಿಂದಕುಮಾರ್‌ ಗೋಯಲ್‌ ಅವರಿಗೆ ಪತ್ನಿ ರೇಣು ಗೋಯಲ್, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.
ಆಸ್ತಿಯ ನೈಜ ಬೆಲೆಯನ್ನು ಲೆಕ್ಕಾಚಾರ ಮಾಡಲು ಐವರು ಸದಸ್ಯರ ಸಮಿತಿಯನ್ನು ರಚಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement