ಕಾಂಗ್ರೆಸಿಗರು ತಲೆಮಾರಿಗೆ ಆಗುವಷ್ಟು ಅಕ್ರಮ ಸಂಪಾದನೆ ಮಾಡಿದ್ದು ಸತ್ಯವಲ್ಲವೇ?: ರಮೇಶಕುಮಾರ ಹೇಳಿಕೆ ಮುಂದಿಟ್ಟು ಕಾಂಗ್ರೆಸ್‌ ಕುಟುಕಿದ ಬಿಜೆಪಿ

ಬೆಂಗಳೂರು : ಮಾಜಿ ಸ್ಪೀಕರ್ ರಮೇಶಕುಮಾರ ಅವರು ಗುರುವಾರ ಕಾಂಗ್ರೆಸ್‌ ಪ್ರತಿಭಟನಾ ಸಭೆಯಲ್ಲಿ ನೀಡಿದ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್‌ ಅನ್ನು ಕುಟುಕಿದೆ.
ನೆಹರು, ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಹೆಸರಿನಲ್ಲಿ ನಾವು ಮೂರ್ನಾಲ್ಕು ತಲೆಮಾರುಗಳಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ, ಈಗ ಅದರ ಋಣ ತೀರಿಸಬೇಕಿದೆ ಎಂದು ಹೇಳಿದ್ದು, ಅವರು ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ. ರಮೇಶಕುಮಾರ್ ಅವರೇನೂ ಸಾಮಾನ್ಯ ವಕ್ತಿಯಲ್ಲ, ಸಾಂವಿಧಾನಿಕ ಹುದ್ದೆಯನ್ನು ಎರಡು ಬಾರಿ ನಿಭಾಯಿಸಿದವರು ಸುಳ್ಳು ಹೇಳಲು ಸಾಧ್ಯವೇ? ಕಾಂಗ್ರೆಸಿಗರು ತಲೆಮಾರಿಗೆ ಆಗುವಷ್ಟು ಅಕ್ರಮ ಸಂಪಾದನೆ ಮಾಡಿದ್ದು ಸತ್ಯವಲ್ಲವೇ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್‌ ಅನ್ನು ಕುಟುಕಿದೆ.

ಇವರು ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರು ನಾಲ್ಕು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆ ಎಂದಾದರೆ ಆ ನಕಲಿ ಗಾಂಧಿ ಕುಟುಂಬದವರು ಎಷ್ಟು ಮಾಡಿರಬಹುದು ಎಂದು ಬಿಜೆಪಿ ಪ್ರಶ್ನಿಸಿದೆ.
ಇದರ ಲೆಕ್ಕ ಕೇಳಲು ED ಅಧಿಕಾರಿಗಳು ಕರೆದರೆ, ನಕಲಿ ಗಾಂಧಿ ಕುಟುಂಬದ ಕಾರಣದಿಂದ ಮೂರ್ನಾಲ್ಕು ತಲೆಮಾರಿಗೆ ಆಗುವಷ್ಟು ಕೂಡಿಟ್ಟವರು ಋಣ ತೀರಿಸಲು ಬೀದಿಗಿಳಿಯಲೇ ಬೇಕಲ್ಲವೇ? ಎಂದು ಕುಟುಕಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿರುವ ಆಸ್ತಿ ಮುಂದಿನ 10 ತಲೆಮಾರುಗಳು ಬಂದು ಹೋದರೂ ಕರಗದು. ಬಂಡೆಯನ್ನು ಒಮ್ಮೆ ಒಡೆದಾಗಲೇ ಕೋಟಿ ಕೋಟಿ ಅಕ್ರಮ ಬಯಲಾಗಿತ್ತು. ಇನ್ನೊಮ್ಮೆ ಬಂಡೆಕುಟ್ಟಿದರೆ ಜಲಸಂಪನ್ಮೂಲ, ಇಂಧನ ಇಲಾಖೆಗಳಲ್ಲಿ ಅಕ್ರಮ, ಕನಕಪುರದಿಂದ ದೆಹಲಿಗೆ ಸಂದಾಯವಾದ ಅಕ್ರಮ ಹಣದ ಮಾಹಿತಿ ಸಿಗಬಹುದು ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement