ಅಮೆರಿಕ ಅಧ್ಯಕ್ಷ ಜೋ ಬೈಡನ್‌ಗೆ ಕೊರೊನಾ ಸೋಂಕು

ವಾಶಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಶ್ವೇತಭವನದ ಕಾರ್ಯದರ್ಶಿ ಕರಿನ್ ಜೀನ ಪಿರೆರಾ ಅವರು ಸ್ಪಷ್ಟಪಡಿಸಿದ್ದಾರೆ. ಜೋ ಬೈಡನ್‌ ಅವರಿಗೆ ಕೋವಿಡ್ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ಪರೀಕ್ಷೆಯಲ್ಲಿ ಬೈಡನ್ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಇದರಿಂದ ಜೋ ಬೈಡನ್ ಶ್ವೇತಭವನದಲ್ಲಿ ಐಸೋಲೇಶನ್‌ಗೆ ಒಳಗಾಗಲಿದ್ದಾರೆ. ಸದ್ಯ ಆರೋಗ್ಯವಾಗಿರುವ ಜೋ ಬೈಡನ್ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮೀಟಿಂಗ್ ನಡೆಸಲಿದ್ದಾರೆ ಎಂದು ಶ್ವೇತಭವನ ಕಾರ್ಯದರ್ಶಿ ಹೇಳಿದ್ದಾರೆ.

ಜೋ ಬೈಡೆನ್ ಈಗಾಗಲೇ ಎರಡೂ ಡೋಸ್ ಹಾಗೂ ಎರಡು ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ. 79 ವರ್ಷದ ಬೈಡನ್ ಆರೋಗ್ಯದ ಕುರಿತು ವೈದ್ಯರು ತೀವ್ರ ನಿಗಾವಹಿಸಿದ್ದಾರೆ. ಸದ್ಯ ಆರೋಗ್ಯವಾಗಿದ್ದು, ಆಡಳಿತದ ಎಲ್ಲಾ ಕಾರ್ಯಗಳನ್ನು ನೋಡಿಕೊಳ್ಳಲಿದ್ದಾರೆ. ಕೋವಿಡ್ ಇತರರಿಗೆ ಹರಡದಂತೆ ಎಚ್ಚರವಹಿಸಲು ಐಸೋಲೇಶನ್‌ಗೆ ಒಳಗಾಗಿದ್ದಾರೆ ಎಂದು ಕಾರ್ಯದರ್ಶಿ ಹೇಳಿದ್ದಾರೆ. ಇತ್ತೀಚೆಗೆ ಬೈಡನ್ ಅತೀ ದೊಡ್ಡ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಇಲ್ಲಿ ಕೋವಿಡ್ ಪರೀಕ್ಷೆ ಮಾಡದ ಹಲವರು ಭಾಗಿಯಾಗಿರುವ ಸಾಧ್ಯತೆ ಇದೆ. ಹೀಗಾಗಿ ಈ ಸಭೆಗಳಿಂದ ಕೋವಿಡ್ ಹರಡಿರಬಹುದು ಎಂದು ಕಾರ್ಯದರ್ಶಿ ಹೇಳಿದ್ದಾರೆ.
ಅಮೆರಿಕದಲ್ಲಿ ಓಮಿಕ್ರಾನ್ ರೂಪಾಂತರಿ ತಳಿಗಳು ಪತ್ತೆಯಾಗಿದೆ. ಎಪ್ರಿಲ್ ತಿಂಗಳಲ್ಲಿ ಪ್ರತಿ ದಿನ ಸರಾಸರಿ 8 ಸಾವಿರ ಕೇಸ್ ಪತ್ತೆಯಾಗುತ್ತಿದ್ದ ಅಮೆರಿಕದಲ್ಲಿ ಇದೀಗ ಪ್ರತಿ ದಿನದ ಕೊರೋನಾ ಪ್ರಕರಣ ಸಂಖ್ಯೆ ಲಕ್ಷ ದಾಟಿದೆ. ಇದು ಮತ್ತೆ ಆತಂಕದ ವಾತಾವಾರಣ ನಿರ್ಮಿಸಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement