ರಾಜ್ಯದಲ್ಲಿ ಶುಕ್ರವಾರ 1,562 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಶುಕ್ರವಾರ 1,562 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಹಾಗೂ 1,107 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಮರಣ ದಾಖಲಾಗಿಲ್ಲ.
ರಾಜಧಾನಿ ಬೆಂಗಳೂರು ನಗರದಲ್ಲಿಯೇ 1,244 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.67 ಮತ್ತು ಮರಣ ಶೇ.0.00 ಇದೆ. ಇಂದು, ಶುಕ್ರವಾರ 33,391 ಮಂದಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಹಾಗೂ 1,14,714 ಮಂದಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 6, ಬಳ್ಳಾರಿ 22, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 45, ಬೆಂಗಳೂರು ನಗರ 1,244, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 28, ದಾವಣಗೆರೆ 5, ಧಾರವಾಡ 38, ಗದಗ 1, ಹಾಸನ 8, ಹಾವೇರಿ 4, ಕಲಬುರಗಿ 10, ಕೊಡಗು 9, ಕೋಲಾರ 11, ಕೊಪ್ಪಳ 6, ಮಂಡ್ಯ 8, ಮೈಸೂರು 34, ರಾಯಚೂರು 1, ರಾಮನಗರ 1, ಶಿವಮೊಗ್ಗ 2, ತುಮಕೂರು 14, ಉಡುಪಿ 14, ಉತ್ತರ ಕನ್ನಡ 4, ವಿಜಯಪುರ 1 ಮತ್ತು ಯಾದಗಿರಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement