ನವದೆಹಲಿ: ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶನಿವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂಸದರು ಸಹ ಭಾಗವಹಿಸಿದ್ದರು.
ಶುಕ್ರವಾರ ಕೋವಿಂದ್ ಅವರ ಗೌರವಾರ್ಥ ಮೋದಿ ಔತಣಕೂಟ ಏರ್ಪಡಿಸಿದ್ದರು.
ಕೇಂದ್ರ ಸಚಿವ ಸಂಪುಟದ ಸದಸ್ಯರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಔತಣಕೂಟದಲ್ಲಿ ಅನೇಕ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ಬುಡಕಟ್ಟು ನಾಯಕರು ಸೇರಿದಂತೆ ದೇಶದ ಎಲ್ಲಾ ಭಾಗಗಳಿಂದ ಉತ್ತಮ ಪ್ರಾತಿನಿಧ್ಯವಿತ್ತು.
ಅಧ್ಯಕ್ಷರಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಸೋಮವಾರ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಸಮುದಾಯದ ವ್ಯಕ್ತಿಯಾಗಲಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ