ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; 10ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ

ಹುಬ್ಬಳ್ಳಿ: ನಗರದ ಹೊರಬಲಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಫ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಗಾಯಗೊಂಡ ಕಾರ್ಮಿಕರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದ್ದು, ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ.

ಅಗ್ನಿ ಅವಘಡದಿಂದಾಗಿ ಒಂದು ಬೈಕ್‌ ಕೂಡ ಭಸ್ಮವಾಗಿದೆ ಎಂದು ಹೇಳಲಾಗಿದೆ. ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆ ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement