ಕುಮಟಾ ಆಸುಪಾಸು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ಬಲ ಬಂದಿದೆ.
ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಈಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಟ್ವೀಟ್‌ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಹೃದಯ ಭಾಗವಾದ ಕುಮಟಾದ ಆಸುಪಾಸಿನಲ್ಲಿ ಸದ್ಯದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಎಲ್ಲರ ಸಹಕಾರವಿರಲಿ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಯಿಸಿರುವ ಕುಮಟಾ ಶಾಸಕ ದಿನಕರ ಶೆಟ್ಟಿ ಅವರು, ಉತ್ತರಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆ ಆಗಲಿದೆ. ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ. ಅವರು ತಮ್ಮ ಟ್ವಿಟರ್ ನಲ್ಲಿ ಮುಂದಿನ ವರ್ಷದ ಒಳಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗಿವುದು ಎಂದು ಹೇಳಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಸುಮಾರು 10 ವರ್ಷದಿಂದ ನಾನು ಇದಕ್ಕಾಗಿ ಪ್ರಯತ್ನ ನಡೆಸಿದ್ದು ಈಗ ನಮ್ಮ ಪ್ರಯತ್ನಕ್ಕೆ ಭರವಸೆ ಸಿಕ್ಕಿದೆ. ಕ್ಷೇತ್ರದ ಜನತೆಯ ಸಹಾಯದಿಂದ ಆಸ್ಪತ್ರೆ ಗಾಗಿ ಹಣ ಸಹಾಯ ಮಾಡುವ ಅನೇಕರನ್ನು ಜಿಲ್ಲೆಗೆ ಕರೆಸಿ ಜಾಗವನ್ನು ನೋಡಿದ್ದೇವೆ. ಆದರೆ ತಾಂತ್ರಿಕ ಕಾರಣ ದಿಂದ ಅಲ್ಲಿಗೆ ನಿಂತಿತ್ತು. ಈಗ ಉಸ್ತುವಾರಿ ಸಚಿವರ ಪ್ರಯತ್ನ ದಿಂದ ಯೋಗ ಕೂಡಿಬಂದಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement