ಮಲಗಿದ್ದವರ ಮೇಲೆ ಗೂಡ್ಸ್‌ ಟೆಂಪೋ ಹರಿಸಿದ ಚಾಲಕ: ಓರ್ವ ಸಾವು

posted in: ರಾಜ್ಯ | 0

ಕೊಪ್ಪಳ: ತಾಲೂಕಿನ‌ ಐತಿಹಾಸಿಕ ಹುಲಗೆಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಮಲಗಿದ್ದವರ ಮೇಲೆ ವಾಹನ ಹರಿದು ಓರ್ವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಳ್ಳಾರಿಯ ಸಿರಗುಪ್ಪದ ತಿಪ್ಪಣ್ಣ (75) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಕನೂರಿನ ಗಾವರಾಳದ ಹನುಮವ್ವ, ಶಿರಗುಪ್ಪಾದ ಮಲ್ಲವ್ವ ಹಾಗೂ ತುಕಾರಾಂ ಗಾಯಗೊಂಡಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇವರು ದೇವಿಯ ದರ್ಶನಕ್ಕೆ ಬಂದಿದ್ದರು ಎಂದು ಹೇಳಲಾಗಿದ್ದು, ದೇವಸ್ಥಾನದ ಆವರಣದಲ್ಲಿದ್ದ ಬಳೆ ಅಂಗಡಿ ಮುಂದೆ ಮಲಗಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಅಶೋಕ ಲೈಲ್ಯಾಂಡ್ ಗೂಡ್ಸ್‌ ವಾಹನ ಮಲಗಿದ್ದವರ ಬಳಿ ಬರುತ್ತಲೇ ಕೆಲವರು ಎದ್ದು ಓಡಿ ಹೋಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೂಡ್ಸ್‌ ವಾಹನ ಚಾಲಕ ಶ್ರೀನಿವಾಸ್ ವಿರುದ್ಧ ಗಾಯಾಳುಗಳು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement