ರಾಜ್ಯಪಾಲರ ಹುದ್ದೆ, ರಾಜ್ಯಸಭಾ ಸದಸ್ಯತ್ವದ ಭರವಸೆ : 100 ಕೋಟಿ ರೂ.ಗಳನ್ನು ವಂಚಿಸಲು ಯೋಜಿಸಿದ್ದ ಜಾಲ ಭೇದಿಸಿದ ಸಿಬಿಐ-ವರದಿ

ನವದೆಹಲಿ: ರಾಜ್ಯಪಾಲರ ಹುದ್ದೆ ಹಾಗೂ ರಾಜ್ಯಸಭೆಗೆ ಟಿಕೆಟ್‌ ಕೊಡಿಸುವುದಾಗಿ ಹೇಳಿ ಸ್ಥಾನಗಳ ಭರವಸೆ ನೀಡಿ ಜನರಿಗೆ 100 ಕೋಟಿ ರೂ. ವಂಚಿಸುವ ಸಂಚು ರೂಪಿಸಿದ್ದ ಜಾಲವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭೇದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಅಧಿಕಾರಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಲಾಗಿದ್ದು, ಗ್ಯಾಂಗ್‌ನ ನಾಲ್ವರನ್ನು ಬಂಧಿಸಲಾಗಿದೆ. ಸಿಬಿಐ ಪ್ರಕಾರ, ಈ ಎಲ್ಲ ಆರೋಪಿಗಳು ರಾಜ್ಯಸಭಾ ಸೀಟುಗಳನ್ನುಕೊಡಿಸುವುದಾಗಿ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದರು, ರಾಜ್ಯಪಾಲರನ್ನಾಗಿ ಮಾಡುವುದಾಗಿ, ಯಾವುದಾದರೂ ಸರ್ಕಾರಿ ಸಂಸ್ಥೆಯ ಅಧ್ಯಕ್ಷರನ್ನಾಗಿ, ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಹುದ್ದೆಗಳನ್ನು ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದು ಅವರನ್ನು ವಂಚಿಸಲು ಯೋಜಿಸುತ್ತಿದ್ದರು ಎಂದು ಹೇಳಲಾಗಿದೆ.
ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುವ ವೇಳೆ ಓರ್ವ ಆರೋಪಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ನಡೆಸುತ್ತಿರುವಾಗ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್‌ನಲ್ಲಿ ಮಹಾರಾಷ್ಟ್ರದ ಲಾತೂರ್‌ನ ಕಮಲಾಕರ್ ಪ್ರೇಮಕುಮಾರ್ ಬಂದಗರ್, ಕರ್ನಾಟಕದ ಬೆಳಗಾವಿಯ ರವೀಂದ್ರ ವಿಠಲ್ ನಾಯ್ಕ ಮತ್ತು ದೆಹಲಿ-ಎನ್‌ಸಿಆರ್ ಮೂಲದ ಮಹೇಂದ್ರ ಪಾಲ್ ಅರೋರಾ, ಅಭಿಷೇಕ್ ಬೂರಾ ಮತ್ತು ಮೊಹಮ್ಮದ್ ಐಜಾಜ್ ಖಾನ್ ಅವರನ್ನು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದಗರ್ ಎಂಬಾತ ಸಿಬಿಐನ ಹಿರಿಯ ಅಧಿಕಾರಿಯಂತೆ ವರ್ತಿಸುತ್ತಿದ್ದ ಮತ್ತು ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳೊಂದಿಗೆ ತನಗೆ “ಸಂಪರ್ಕವಿದೆ ಎಂದು ಬಿಂಬಿಸಿಕೊಳ್ಳುತ್ತಿದ್ದ ಎಂದು ಹೇಳಲಾಗಿದೆ.

ರಾಜ್ಯಸಭೆಯಲ್ಲಿ ಸೀಟುಗಳನ್ನು ಕೊಡಿಸಲಾಗುವುದು, ರಾಜ್ಯಪಾಲರಾಗಿ ನೇಮಕ ಮಾಡಿಸಲಾಗುವುದು, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳ ಅಡಿಯಲ್ಲಿ ಸರ್ಕಾರ ನಡೆಸುವ ವಿವಿಧ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಮಾಡಿಸಲಾಗುವುದು ಹೇಳಿ ಜನರಿಂದ ಭಾರಿ ಹಣ ಪಡೆದು ವಂಚಿಸುವ ಪಿತೂರಿ ನಡೆಸಿದ್ದರು ಎಂದು ಎಫ್ಐಆರ್ ಆರೋಪಿಸಿದೆ.
ಕೆಲವು ಕೆಲಸಗಳಿಗಾಗಿ ನೇರವಾಗಿ ಅಥವಾ ಅಭಿಷೇಕ್ ಬೂರಾ ಅವರಂತಹ ಮಧ್ಯವರ್ತಿಗಳ ಮೂಲಕ ಜನರಲ್ಲಿ ನಂಬಿಕೆ ಬರುವಂತೆ ಮಾಡಲು ಹಿರಿಯ ಅಧೀಕಾರಿಗಳು ಮತ್ತು ರಾಜಕೀಯ ನಾಯಕರ ಹೆಸರನ್ನು ಹೇಳಿಸುತ್ತಿದ್ದರು ಎಂಬ ಮಾಹಿತಿ ಸಿಬಿಐಗೆ ಮಾಹಿತಿ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ತತ್ಕಾಲ್ ಟಿಕೆಟ್‌ಗಾಗಿ ಸರದಿ ಬ್ರೇಕ್‌ ಮಾಡಿದ್ದನ್ನು ವಿರೋಧಿಸಿದವರ ಮೇಲೆ ರೈಲ್ವೇ ನಿಲ್ದಾಣದಲ್ಲಿ ಗುಂಡಿನ ದಾಳಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement